Mysore
26
scattered clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

hanuru

Homehanuru

ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …

ಹನೂರು: ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಬೆಂಕಿ ಹಚ್ಚುತ್ತಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಶಿಲುವೆಪುರ ಗ್ರಾಮದ ಮೊದಲೆ ಮುತ್ತು ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಕೊಳ್ಳೇಗಾಲ ಬಫರ್ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಂತರಗಂಗೆಯಲ್ಲಿ ನಿತ್ಯ …

ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್‌ ಬೇಲಿಯನ್ನೇ ನಾಶಪಡಿಸಿವೆ. ಇದಲ್ಲದೇ ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಮುಸುಕಿನ ಜೋಳ, …

ಹನೂರು: ತಾಲ್ಲೂಕಿನ ಬೂದುಬಾಳು ಗ್ರಾಮದಲ್ಲಿ ನಡೆದ ಪಲ್ಲಕ್ಕಿ ಉತ್ಸವದ ವೇಳೆ ಕುಣಿಯುವಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ನಿಂದನೆ ಮಾಡಿದ್ದ ನಾಲ್ವರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಹನೂರು ತಾಲ್ಲೂಕಿನ ಬೂದಬಾಳು ಗ್ರಾಮದ ಆಕಾಶ್, ಮನೋಜ್, …

ತೆಳ್ಳನೂರು -ಬಂಡಳ್ಳಿ ಮಾರ್ಗ ಮಧ್ಯದಲ್ಲಿ ದುರ್ಘಟನೆ ಹನೂರು: ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಬಸ್‌ವೊಂದು ಅಪಘಾತಕ್ಕಿಡಾಗಿ ಓರ್ವ ಮೃತಪಟ್ಟು,  35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜರುಗಿದೆ. ದೊಡ್ಡಿಂದುವಾಡಿ ಗ್ರಾಮದ ನವೀನ್ (೩೨) ಮೃತಪಟ್ಟವರು. ಮದುವೆ ನಿಶ್ಚಿತಾರ್ಥ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ …

ಹನೂರು: ತಾಲ್ಲೂಕಿನ ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ತೆರಳುತ್ತಿದ್ದ ಹಸುವಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ ಮಾದೇಶ್ ಎಂಬವರಿಗೆ ಸೇರಿದ ಹಸು ರಸ್ತೆ ಸಮೀಪ ಸಾಗುತ್ತಿದ್ದಾಗ ಮಹದೇಶ್ವರ ಬೆಟ್ಟದತ್ತ ಹೋಗುತ್ತಿದ್ದ …

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಬೆಂಕಿ ಹಚ್ಚಿ ವಾಪಸ್ ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಿನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರೆದೊಡ್ಡಿ ಗ್ರಾಮದ ನಿವಾಸಿಗಳಾದ ಸಿದ್ದು ನಾಯಕ, ಮಾದೇಶ್ ಬಂಧಿತ ಆರೋಪಿಗಳಾಗಿದ್ದಾರೆ. …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಾರ್ಚ್‌.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ ನೀಡಲಿದ್ದು, …

ಚಾಮರಾಜನಗರ: ಹನೂರು ತಾಲ್ಲೂಕಿನ ಚಂಗವಾಡಿ ಗ್ರಾಮದ ಬಳಿಯಿರುವ ಶ್ರೀ ಪಾರ್ವತಿ ಬೆಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 30-35 ವರ್ಷ ವಯೋಮಿತಿಯ ಮೃತನ ಎದೆಯ ಮೇಲೆ ನಂದ ಹಾಗೂ ವಿವೇಕ ಎಂಬ ಹಚ್ಚೆಯಿದೆ. ನೀಲಿ ಮತ್ತು …

Stay Connected​
error: Content is protected !!