ಬೆಂಗಳೂರು: ಹಾಸನ ಜಿಲ್ಲೆಯ ಪೆನ್‌ಡ್ರೈವ್ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿವಿಧ ಮಹಿಳೆಯರ ಖಾಸಗಿ ವಿಡಿಯೊಗಳು ಹರಿದಾಡುತ್ತಿದೆ ಎನ್ನಲಾಗುತ್ತಿದ್ದು, ಈ ಕುರಿತು ಮಹಿಳಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ತನಿಖಾ ತಂಡ ರಚಿಸಲು ಒತ್ತಾಯಿಸಿದೆ. …









