ಬೆಂಗಳೂರು: ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. …