ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ. ಇನ್ನು ವಾಯುವಿಹಾರಿಗಳಿಗೂ ಇದರಿಂದ ಬಹಳ ತೊಂದರೆಯಾಗುತ್ತಿದೆ. ಮನೆಗಳ ಮುಂಭಾಗ ನಿಲ್ಲಿಸಿರುವ ದ್ವಿಚಕ್ರವಾಹನಗಳ ಸೀಟ್‌ಗಳನ್ನು ಕಚ್ಚಿಹಾಕಿರುವ ಪ್ರಕರಣಗಳು …

