ಮುಂಬೈ: ಮಹಾರಾಷ್ಟ್ರದ ಜಲಂಗಾವ್‌ನಲ್ಲಿ ಇಂದು ಭೀಕರ ರೈಲು ದುರಂತ ಸಂಭವಿಸಿದೆ. ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. …