ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜೀವನದಿ ಕಾವೇರಿ ಭೋರ್ಗರದು ಹರಿಯುತ್ತಿದ್ದಾಳೆ. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ ಪರಿಣಾಮ ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತಲಕಾವೇರಿ ಸೇರಿದಂತೆ ಬ್ರಹ್ಮಗಿರಿ ಬೆಟ್ಟ ಶ್ರೇಣಿಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ ನದಿಯ ಉಪನದಿಗಳಾದ ಕನ್ನಿಕೆ, ಸುಜ್ಯೋತಿ …









