ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು ಚಿತ್ರೋತ್ಸವಗಳಲ್ಲಿ ಅತ್ಯಂತ ಮಹತ್ವಪೂರ್ಣವಾದ ಉತ್ಸವ ಇದು ಎನ್ನಲಾಗುತ್ತಿದೆ. ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವ ಈಗ ಬಹುತೇಕ ಗ್ಲಾಮರ್ ಲೋಕವನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿದೆ. …

