ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್.15ರಿಂದ ಲಕ್ಷ ದೀಪೋತ್ಸವ ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಮಂಜುನಾಥಸ್ವಾಮಿಯ ವಾರ್ಷಿಕ ಲಕ್ಷ ದೀಪೋತ್ಸವ ನಡೆಯಲಿದೆ. ನವೆಂಬರ್.15ರಿಂದ 20ರವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ವಿವಿಧ …


