ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್‌ಮೇಕರ್‌ನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಗುರುವಾರ ತಡರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ. …

