ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 23,775 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. …


