ಮೈಸೂರು: ಖ್ಯಾತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಎಲ್.ಭೈರಪ್ಪ ಅವರು ಅಂತ್ಯಸಂಸ್ಕಾರ ನೆರವೇರಿತು. ಮೊದಲಿಗೆ ಎಸ್.ಎಲ್.ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಕೆ ಮಾಡಿದರು. …


