2014ರಲ್ಲಿ ಬಿಡುಗಡೆಯಾದ ‘ಲವ್ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಬಾರಿ ಗಣೇಶ್ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಾರೆ. …

