ಹೊಸದಿಲ್ಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, …