ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ ದೊರೆತಿರುವುದು ಸ್ವಾಗತಾರ್ಹ ಕ್ರಮ. ಬಹಿಷ್ಕಾರ ಸಾಮಾಜಿಕ ಪಿಡುಗಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ, ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ …

