ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರವಿಕುಮಾರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. …










