ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ. ಗಣೇಶ್ ಹಾಗೂ ಶರವಣ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಇವರಿಬ್ಬರು ಕೆ.ಆರ್.ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. …