ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ ನಡೆದಿದೆ. ಮೈಸೂರಿನ ವಿಜಯನಗರದ ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಹಾಸ್ಟೆಲ್‌ನ ಅನತಿ ದೂರದಲ್ಲೇ ಯುವಕನಿಂದ ದುಷ್ಕೃತ್ಯ ನಡೆದಿದೆ. …









