ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರಿಂಕೋರ್ಟ್ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆಶಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ. …







