ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ. ದಕ್ಷಿಣ ಕಾಶ್ಮೀರದ ಸೈದ್‌ಪೋರಾ ಪ್ರದೇಶದಲ್ಲಿ ಉಗ್ರನ ಮೃತದೇಹ ಪತ್ತೆಯಾಗಿದ್ದು, ಸ್ಥಳದಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. …










