ಮೈಸೂರು: ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಯಲ್ಲಿ ಪ್ರಧಾನ ಆಕರ್ಷಣೆಯಾದ ಆನೆಗಳನ್ನು ಸಾಂಪ್ರದಾಯಿಕವಾಗಿ ಕಾಡಿನಿಂದ ನಾಡಿಗೆ ಬೀಳ್ಕೊಡಲು ಆಗಸ್ಟ್ 21ರಂದು ವೀರನಹೊಸಳ್ಳಿಯಲ್ಲಿ ವಿಧ್ಯುಕ್ತವಾಗಿ ಗಜಪಯಣ ಆಯೋಜಿಸಲಾಗಿದೆ ಎಂದು ಶುಕ್ರವಾರ (ಆ.9) ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. …

