Mysore
26
overcast clouds

Social Media

ಭಾನುವಾರ, 15 ನವೆಂಬರ್ 2026
Light
Dark

Wild animal

HomeWild animal

 ಕೊಡಗು: ಇಲ್ಲಿನ ನರಿಯಂದಡ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಚೆಯ್ಯಂಡಾಣೆ ಸಮೀಪದ ಈ ಗ್ರಾಮದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಗ್ರಾಮದ ನಿವಾಸಿ ಜೈಶಂಕರ್‌ ಅವರಿಗೆ ಸೇರಿದ ಹಸುವನ್ನು ಕೊಂದ ಹುಲಿ, ಅದರ ಅರ್ಧಭಾಗವನ್ನು ತಿಂದು ಹಾಕಿದೆ. …

ಮೈಸೂರು: ಹುಲಿ ಸೆರೆಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಸುವನ್ನು ಕಟ್ಟಿ ಬೋನು ಇರಿಸಿದ್ದರು. ಆದರೆ ಹಸುವನ್ನು ತಿನ್ನಲು ಬಂದ …

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಗರ್ಭಿಣಿ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಅರಣ್ಯದ ಗಡಿಯಿಂದ ಸುಮಾರು 150 ಮೀಟರ್ ದೂರದ ಖಾಸಗಿ ಜಮೀನಿನಲ್ಲಿ ಆನೆ ಪತ್ತೆಯಾಗಿದ್ದು, ಸಾವಿಗೆ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಆಲತ್ತೂರು ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಬೀಟ್ರೋಟ್ ಬೆಳೆ ನಾಶವಾಗಿದೆ. ರೈತ ಚಂದ್ರಕುಮಾರ್ ಅವರ ಸರ್ವೆ ನಂಬರ್‌ 154ರ ಜಮೀನಿಗೆ ನುಗ್ಗಿದ ಕಾಡಾನೆಗಳು, ಬೆಳೆಯನ್ನು ತುಳಿದು ತಿಂದು ಹಾನಿಪಡಿಸಿವೆ. …

ಯಳಂದೂರು: ತಾಲ್ಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಚಿಕ್ಕಣ್ಣ ಗೌಡ ಅವರ ಜಮೀನಿನಲ್ಲಿ ಪತ್ತೆಯಾದ ಹೆಜ್ಜೆ ಗುರುತುಗಳಿಂದಾಗಿ, ಈ ಭಾಗದಲ್ಲಿ ಚಿರತೆ ಸಂಚರಿಸಿರುವ ಶಂಕೆ ವ್ಯಕ್ತವಾಗಿದೆ. ಕೃಷಿ …

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ ಗ್ರಾಮದ ರೈತ ಅರ್ಜುನ್ ಅವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸುಮಾರು ನಾಲ್ಕರಿಂದ ಐದು ವರ್ಷದ ಹೆಣ್ಣು ಹುಲಿ …

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಗುಂಡಾಪುರ ಗ್ರಾಮದ ಚಿನ್ನರಾಜು ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ. ಪ್ರತಿದಿನದಂತೆ ಅವರು ದನ-ಕುರಿ ಮೇಯಿಸಲು ಅರಣ್ಯದಂಚಿಗೆ …

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ ನಡೆಸಿದ ಕಾರ್ಯಾಚರಣೆಯಲ್ಲಿ ಆನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹಂಚೀಪುರ ಗ್ರಾಮದಲ್ಲಿ ಆನೆ ದಾಳಿಗೆ ಸಿಲುಕಿ ರೈತರೊಬ್ಬರು ಮೃತಪಟ್ಟಿದ್ದರು. …

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ ಟಾಟಾ ಎಸ್ಟೇಟ್ ಕಡೆಗೆ ತೆರಳಿದೆ ರಸ್ತೆಯಲ್ಲಿ ವಾಹನದಲ್ಲಿ ಸಂಚರಿಸುತ್ತಿದ್ದವರು ಹುಲಿಯನ್ನು ಗಮನಿಸಿ ವಿಡಿಯೋ ಚಿತ್ರೀಕರಿಸಿರುವುದಾಗಿ ತಿಳಿದುಬಂದಿದೆ. ಹುಲಿ ಸಂಚಾರದ ಹಿನ್ನೆಲೆಯಲ್ಲಿ …

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ ಚಾಲಕನಿಗೆ ಅರಣ್ಯಾಧಿಕಾರಿಗಳು ಸೂಕ್ತ ಶಿಕ್ಷೆ ವಿಧಿಸಿದ್ದಾರೆ. ಮಲಪ್ಪುರಂ ಜಿಲ್ಲೆಯ ಮರುತಾ ಮೂಲದ ಜಿನ್ಷಾದ್ ಸಿ. ಎಂಬಾತನೇ ದಂಡಕ್ಕೊಳಗಾದ ಲಾರಿ ಚಾಲಕ. …

Stay Connected​
error: Content is protected !!