ಕೆ.ಆರ್ ನಗರ: ಇಂದಿನ ವಿದ್ಯಾರ್ಥಿಗಳು ಮೊಬೈಲ್, ಟಿ.ವಿ.ನೋಡುವುದರಲ್ಲಿ ಹೆಚ್ಚಿನ ಸಮಯ ಕಳೆಯತ್ತಿದ್ದಾರೆ. ವಿದ್ಯಾರ್ಥಿಗಳ ಓದಿಗೆ ಯೋಗಾಭ್ಯಾಸ ಪೂರಕವಾಗಲಿದ್ದು ಎಲ್ಲಾ ವಿದ್ಯಾರ್ಥಿಗಳು ಪ್ರತಿದಿನ ಮನೆಯಲ್ಲಿ ಅರ್ಧ ಗಂಟೆ ಯೋಗಾಭ್ಯಾಸ ಮಾಡಿ ಎಂದು ಲಯನ್ಸ್ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಟಿ.ಪಿ ನಂದೀಶ್ ಮಕ್ಕಳಿಗೆ ಕಿವಿಮಾತು ಹೇಳಿದರು. …