ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿಸಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯದ ಬಗ್ಗೆ ಅರ್ಹ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. …



