ಮೈಸೂರು: ಇಲ್ಲಿನ ಕೆ.ಆರ್.ಮೊಹಲ್ಲಾದ ಡಿ.ಬನುಮಯ್ಯ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಂದು ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ವೀರಭದ್ರೇಶವರ ಸ್ವಾಮಿಯ ಜನ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 10.30ರಿಂದ 11.30ರೊಳಗಿನ ಶುಭ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. …







