Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಬಿಎಂಆರ್ಸಿಎಲ್: ೩೫ ಸಿವಿಲ್ ಇಂಜಿನಿಯರ್ ಹುದ್ದೆಗಳು

ಸರ್ಕಾರಿ ಉದ್ಯೋಗ ಅರಸುತ್ತಿರುವ ಸಿವಿಲ್ ಇಂಜಿನಿಯರಿಂಗ್ ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ. ಬೆಂಗಳೂರು ಮೆಟ್ರೋ ರೈಲು ನಿಗಮದಲಿ. ೩೫ ಸಿವಿಲ್ ಇಂಜಿನಿಯರ್ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಮೇ ೩ ಅಥವಾ ಅದಕ್ಕೂ ಮೊದಲು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಬಿಎಂಆರ್‌ಸಿಎಲ್ ನೇಮಕಾತಿ ೨೦೨೫ರ ಅರ್ಹತಾ ವಿವರಗಳು…

ಶೈಕ್ಷಣಿಕ ಅರ್ಹತೆ: ಬಿಎಂಆರ್‌ಸಿಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ. ಅಥವಾ ಬಿ. ಟೆಕ್ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:  ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನೇಮಕಾತಿ ಅಽಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಟ ವಯಸ್ಸು ೩೫ ವರ್ಷಗಳು.

ವಯಸ್ಸಿನ ಸಡಿಲಿಕೆ:  ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿ ಟೆಡ್ ಮಾನದಂಡಗಳ ಪ್ರಕಾರ ಆಯ್ಕೆ ಪ್ರಕ್ರಿಯೆ

ಗೇಟ್ ಸ್ಕೋರ್: ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಸಂದರ್ಶನಗಳ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

(ಪದವಿ ಎಂಜಿನಿಯರ್ (ಸಿವಿಲ್) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಮೇ ೩ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ- ದೃಢೀಕೃತ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್ (ಎಚ್‌ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ೩ನೇ ಮಹಡಿ, ಬಿಎಂಟಿಸಿ ಸಂಕೀರ್ಣ, ಕೆ.ಎಚ್.ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭ ಈ ವಿಳಾಸಕ್ಕೆ ಮೇ ೭ರೊಳಗೆ ತಲುಪಿಸಬೇಕು

Tags:
error: Content is protected !!