ಟೆಕ್‌

ಎನ್‌ಕ್ರಿಪ್ಶನ್‌ ತೆಗೆದರೆ ಭಾರತ ತೊರೆಯುತ್ತೇವೆ : ವಾಟ್ಸ್‌ಆಪ್‌ !

ದೆಹಲಿ : ವಾಟ್ಸ್‌ಆಪ್‌ ಎನ್‌ಕ್ರಿಪ್ಶನ್‌ ವ್ಯವಸ್ಥೆಗೆ ಧಕ್ಕೆಯಾದ್ರೆ ನಾವು ಭಾರತ ತೊರೆಯುತ್ತೇವೆ ಎಂದು ವಾಟ್ಸ್‌ ಆಪ್‌ ಪರ ವಕೀಲರು ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸೋಶಿಯಲ್‌ ಮೀಡಿಯಾಗೆ ಸಂಬಂಧಿಸಿದಂತೆ 2021ರ ಮಾಹಿತಿ ಮತ್ತು ತಂತ್ರಜ್ಞಾನ ನಿಯಮದಡಿ ವಾಟ್ಸ್‌ಆಪ್‌ ಹಾಗೂ ಅದ್ರ ಮಾತೃ ಸಂಸ್ಥೆ ಮೆಟಾ ಕಂಪನಿಯನ್ನ ದಿಲ್ಲಿ ಹೈಕೋರ್ಟ್‌ ವಿಚಾರಣೆ ನಡೆಸಿದೆ.

ಈ ವೇಳೆ ಕೋರ್ಟ್‌ಗೆ ಹಾಜರಾದ ವಾಟ್ಸ್‌ಆಯಪ್‌ ಪರ ವಕೀಲ ತೇಜಸ್‌ ಕಾರಿಯಾ, ವಾಟ್ಸ್‌ಆಯಪ್‌ನ ಎಂಡ್-ಟು-ಎಂಡ್‌ ಎನ್‌ಕ್ರಿಪ್ಶನ್‌ ಯಾವುದೇ ವ್ಯಕ್ತಿ ಇನ್ನೊಬ್ಬರಿಗೆ ಕಳುಹಿಸೊ ಮೆಸೇಜ್‌ನ್ನ ಬೇರೆಯವ್ರು ನೋಡಲು ಆಗದಿರೊ ಸುರಕ್ಷತಾ ವ್ಯವಸ್ಥೆ ಹೊಂದಿದೆ.

ಈ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್‌ನ್ನ ಬೇರೆಯವ್ರು ಓದೊದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗೊದಿಲ್ಲ ಅಂತ  ಬಳಸುತ್ತಾರೆ. ಹಾಗಾಗಿ, ಎನ್‌ಕ್ರಿಪ್ಶನ್‌ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯೊದಿಲ್ಲ ಎಂದು ವಾಟ್ಸ್‌ ಆಪ್‌ ವಕೀಲರು ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ 2021ರಲ್ಲಿ ಐಟಿ ವಿಭಾಗದಲ್ಲಿ ಕೆಲ ನಿಯಮಗಳನ್ನ ಜಾರಿ ತಂದಿತ್ತು. ಅದನ್ನ ಪ್ರಶ್ನಿಸಿ ವಾಟ್ಸ್‌ಆಯಪ್‌ ದಿಲ್ಲಿ ಹೈಕೋರ್ಟ್‌ ಮೊರೆ ಹೋಗಿತ್ತು. ಇದೀಗ ಅರ್ಜಿಯ ವಿಚಾರಣೆ ವೇಳೆ ಅದ್ರ ವಕೀಲರು ಕೋರ್ಟ್‌ಗೆ ಈ ರೀತಿ ಹೇಳಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

4 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

5 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

5 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

5 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

5 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

9 hours ago