ಟೆಕ್‌

೬,೦೦೦ ಎಂಎಎಚ್ ಬ್ಯಾಟರಿಯ ಹೊಸ ಬಜೆಟ್ ಸ್ಮಾರ್ಟ್‌ ಫೋನ್‌

ಪ್ರಸಿದ್ಧ ರಿಯಲ್ ಮಿ ಕಂಪೆನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್ ಫೋನ್ ೪ಜಿಬಿ + ೧೨೮ಜಿಬಿ ಆಯ್ಕೆಗೆ ೧೨,೯೯೯ ರೂ.ಗಳಿಂದ ಪ್ರಾರಂಭವಾಗುತ್ತದೆ. ೬ಜಿಬಿ + ೧೨೮ಜಿಬಿ ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ೧೩,೯೯೯ ರೂ. ಇದು ಪ್ರಸ್ತುತ ದೇಶದಲ್ಲಿ ಫ್ಲಿಪ್ ಕಾರ್ಟ್, ರಿಯಲ್ ಮಿ ಇಂಡಿಯಾ ಇ-ಸ್ಟೋರ್ ಮತ್ತು ಆಯ್ದ ಆಫ್‌ಲೈನ್ ಚಿಲ್ಲರೆ  ಅಂಗಡಿಗಳಲ್ಲಿ ಖರೀದಿಗೆ ಲಭ್ಯವಿದೆ.

ಈ ಹ್ಯಾಂಡ್‌ಸೆಟ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ ೬,೩೦೦ ಚಿಪ್ ಸೆಟ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ೪೫ ಡಬ್ಲ್ಯು ವೈರ್ಡ್ ಮತ್ತು ೫ ಡಬ್ಲ್ಯು ರಿವರ್ಸ್ ಚಾರ್ಜಿಂಗ್ ಬೆಂಬಲದೊಂದಿಗೆ ಬರೋಬ್ಬರಿ ೬,೦೦೦ ಎಂಎಎಚ್ ಬ್ಯಾಟರಿ ಯಿಂದ ಬೆಂಬಲಿತವಾಗಿದೆ. ೩೨-ಮೆಗಾ ಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.

ಡ್ಯುಯಲ್ ಸಿಮ್ ಹೊಂದಿರುವ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್‌ಫೋನ್ ೬.೬೭-ಇಂಚಿನ ಪೂರ್ಣ-ಎಚ್‌ಡಿ ಪ್ಲಸ್ (೭೨೦ ಹಿ ೧,೬೦೪ ಪಿಕ್ಸೆಲ್‌ಗಳು) ಡಿಸ್‌ಪ್ಲೇ ಯನ್ನು ಹೊಂದಿದ್ದು, ೧೨೦HZ ವರೆಗೆ ರಿಫ್ರೆಶ್ ದರ, ೧೮೦HZವರೆಗೆ ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ. ಸೆಲ್ಛಿಗಳು ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ ೮-ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಸಹ ಹೊಂದಿದೆ.

ಈ ಸ್ಮಾರ್ಟ್‌ಫೋನ್ ೬,೦೦೦ Mahಬ್ಯಾಟರಿಯನ್ನು ಹೊಂದಿದ್ದು, ೪೫w ವೈರ್ಡ್ ಮತ್ತು ೫U ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ಅನ್ನು ಹೊಂದಿದೆ. ಸಂಪರ್ಕ ಆಯ್ಕೆಗಳಲ್ಲಿ ೫ ಎ, ಡ್ಯುಯಲ್

೪ಎ VoLTE, Wi-Fi, ಬ್ಲೂಟೂತ್ ೫.೩, GPs ಮತ್ತು USB ಟೈಪ್-C ಪೋರ್ಟ್ ಸೇರಿವೆ

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

8 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

37 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago