ಟೆಕ್‌

ನಿಮ್ಮ ಬಳಿ ಈ 2 ಒನ್‌ಪ್ಲಸ್‌ ಮೊಬೈಲ್‌ ಇದ್ದರೆ ಸಾಫ್ಟ್‌ವೇರ್‌ ಅಪ್‌ಡೇಟ್‌ ಮರೆತುಬಿಡಿ!

ಭಾರತದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಒನ್‌ಪ್ಲಸ್‌ ಇದೀಗ ತನ್ನ ಒಂದಷ್ಟು ಗ್ರಾಹಕರಿಗೆ ಶಾಕಿಂಗ್‌ ಹಾಗೂ ಬೇಸರದ ಸುದ್ದಿಯನ್ನು ನೀಡಿದೆ. ತನ್ನ ಒನ್‌ಪ್ಲಸ್‌ 8 ಹಾಗೂ ಒನ್‌ಪ್ಲಸ್‌ 8 ಪ್ರೊ ಬಳಕೆದಾರರಿಗೆ ನಿಮ್ಮ ಮೊಬೈಲ್‌ಗಳು ಕೊನೆಯದಾಗಿ ಸಾಫ್ಟ್‌ವೇರ್‌ ಅಪ್‌ಡೇಟ್‌ಗಳನ್ನು ಸ್ವೀಕರಿಸುತ್ತಿವೆ ಎಂದು ತಿಳಿಸಿದೆ.

ಈ ಮೂಲಕ ಈ ಎರಡು ಮೊಬೈಲ್‌ಗಳ ಸಾಫ್ಟ್‌ವೇರ್‌ ಅಪ್‌ಡೇಟ್‌ ಮುಕ್ತಾಯದ ಬಗ್ಗೆ ಒನ್‌ಪ್ಲಸ್‌ ಅಧಿಕೃತವಾಗಿ ತಿಳಿಸಿದೆ. 2020ರ ಏಪ್ರಿಲ್‌ನಲ್ಲಿ ಬಿಡುಗಡೆಯಾದ ಈ ಫೋನ್‌ಗಳಿಗೆ 4 ವರ್ಷಗಳ ಭದ್ರತಾ ನವೀಕರಣಗಳು ಮತ್ತು 3 ಪ್ರಮುಖ ಆಂಡ್ರಾಯ್ಡ್‌ ಆಪರೇಟಿಂಗ್‌ ಸಿಸ್ಟಮ್‌ ಅಪ್‌ಡೇಟ್‌ಗಳ ಭರವಸೆಯನ್ನು ನೀಡಿತ್ತು.

ಬಿಲ್ಡ್‌ ನಂಬರ್‌ ಆಕ್ಸಿಸಜ್‌ ಓಎಸ್‌ 13.1.0.587 ಅನ್ನು ಹೊಂದಿರುವ ಅಪ್‌ಡೇಟ್‌ ಅಂತಿಮವಾಗಿರಲಿದ್ದು, ಇದು 2024ರ ಭದ್ರತಾ ಪ್ಯಾಚ್‌ ಅಪ್‌ ಅನ್ನು ಒಳಗೊಂಡಿರಲಿದೆ. ಹೀಗಾಗಿ ಈ ಎರಡು ಮೊಬೈಲ್‌ಗಳ ಗ್ರಾಹಕರು ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನಿರೀಕ್ಷೆಯನ್ನು ಇಟ್ಟುಕೊಳ್ಳುವಂತಿಲ್ಲ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

2 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

4 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

4 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

4 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

4 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

4 hours ago