ನವದೆಹಲಿ: ಇಂದು(ಏ.26) ದೇಶಾದ್ಯಂತ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಮತದಾರರು ಮತದಾನ ಮಾಡಿದ ಒಂದು ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಖುಷಿ ಪಡುವುದು ಸರ್ವೆ ಸಾಮಾನ್ಯ. ಅದರಂತೆ ಎಕ್ಸ್ ಖಾತೆ ಬಳಸಿ ತಮ್ಮ ಚಿತ್ರಗಳನ್ನು ಪೋಸ್ಟ್ ಮಾಡಲು ಎಕ್ಸ್ ಒಳಗೆ ಬಂದ ಬಳಕೆದಾರರಿಗೆ ಸೇವೆಯಲ್ಲಿ ಸರ್ವರ್ ಡೌನ್ ಕಾಣಿಸಿಕೊಂಡಿದ್ದು, ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಧ್ಯಾಹ್ನ ಸುಮಾರು 1.15ರ ಹೊತ್ತಿಗೆ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಎಕ್ಸ್ ವೆಬ್‌ಸೈಟ್ ಹಾಗೂ ಅಪ್ಲಿಕೇಶನ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಡೌನ್‌ಡಿಟೆಕ್ಟರ್ ಈ ಕುರಿತು ವರದಿ ಮಾಡಿದೆ. ಶೇ.57 ರಷ್ಟು ಬಳಕೆದಾರರು ಸರ್ವರ್ ಸಮಸ್ಯೆ, ಶೇ.36 ರಷ್ಟು ಎಕ್ಸ್ ಅಪ್ಲಿಕೇಶನ್‌ನಿಂದ ಸಮಸ್ಯೆ ಹಾಗೂ ಶೇ.7 ರಷ್ಟು ಮಂದಿಗೆ ಲಾಗಿನ್ ಸಮಸ್ಯೆಯಾಗಿದೆ ಎಂದು ಬಳಕೆದಾರರು ದೂರಿದ್ದರು. ಈ ಕುರಿತು ಬಳಕೆದಾರರು ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ಹೊರಹಾಕಿದ್ದಾರೆ.
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…