ನಂಜನಗೂಡು: ದೇಗುಲ ಧ್ವಂಸ ವಿಚಾರವಾಗಿ ಹೊಡೆದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು

ನಂಜನಗೂಡು: ಮಹಾದೇವಮ್ಮ ದೇಗುಲ ನೆಲಸಮವಾದ ವಿಚಾರಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಹುಚ್ಚಗಣಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.

ಗಲಾಟೆಯಲ್ಲಿ ಉದಯರವಿ ಎಂಬವರಿಗೆ ತೀವ್ರ ಪೆಟ್ಟುಬಿದ್ದು ರಕ್ತ ಬರುತ್ತಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘರ್ಷಣೆ ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ದೇಗುಲ ನೆಲಸಮಗಳಿಸಿದ್ದ ಸ್ಥಳಕ್ಕೆ ಇಂದು (ಬುಧವಾರ) ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರೂ ಭಾಗಿಯಾಗಿದ್ದರು.

× Chat with us