ಮೈಸೂರು: ನಿಯಂತ್ರಣಕ್ಕೆ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಮೂವರು ದುರ್ಮರಣ

ಮೈಸೂರು: ತಿ.ನರಸೀಪುರ ನೆರಗ್ಯಾತನಹಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಹಸುವಟ್ಟಿ ಗ್ರಾಮದ ಚಾಲಕ ಸುರೇಶ್​ (24), ಕಿರಣ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಣಿಕ ಮಹೇಶ್ (25) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ.

ತಿ.ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

× Chat with us