ಟಾಲಿವುಡ್‌ ನಟ ಸಾಯಿ ಧರ್ಮ ತೇಜ್‌ ಬೈಕ್‌ ಅಪಘಾತ: ಸ್ಥಿತಿ ಗಂಭೀರ

ಹೈದರಾಬಾದ್‌: ಇಲ್ಲಿನ ಕೇಬಲ್‌ ಸೇತುವೆ ಬಳಿ ಬೈಕ್‌ ಅಪಘಾತದಲ್ಲಿ ಟಾಲಿವುಡ್‌ ನಟ ಸಾಯಿ ಧರ್ಮ ತೇಜ್‌ ತೀವ್ರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ.

ತೇಜ್‌ ಅವರು ಶುಕ್ರವಾರ ರಾತ್ರಿ ಬೈಕ್‌ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್‌ ಸ್ಕಿಡ್‌ ಆಗಿದೆ. ಸಾಯಿ ಧರ್ಮ ತೇಜ್‌ ಅವರು ಹೆಲ್ಮೆಟ್‌ ಧರಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಜುಬಿಲಿ ಹಿಲ್ಸ್‌ನ ಅಪೋಲೊ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಚಿರಂಜೀವಿ ಕುಟುಂಬದ ಸದಸ್ಯರಾಗಿರುವ ಸಾಯಿ ಧರ್ಮ ತೇಜ್‌ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಲು ಚಿರಂಜೀವಿ, ಪವನ್‌ಕಲ್ಯಾಣ್‌, ವರುಣ್‌ ತೇಜ್‌ ಸೇರಿದಂತೆ ಹಲವರು ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

× Chat with us