ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರಿಗೆ ಮತ ನೀಡಬೇಕು ಎಂದು ಮಾಜಿ ಮೇಯರ್‌ಗಳು ಮನವಿ ಮಾಡಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು (ಏ.೧೨) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮೇಯರ್ ಪರಿಷತ್, ನಗರಕ್ಕೆ ಬೇಕಾದ ಅಗತ್ಯ ಕಾರ್ಯಕ್ರಮಗಳು, ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಕೋರಿದರು.
ಇವರ ಕೂಟವು ಬಿಜೆಪಿ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಅವಧಿ ಹಾಗೂ ಬಿಜೆಪಿ ಅವಧಿಯಲ್ಲಿನ ಅಭಿವೃದ್ಧಿಗಳನ್ನು ತುಲನೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.
ಮೋದಿ ಅವರು ಮೈಸೂರನ್ನು ಪ್ಯಾರಿಸ್ ಮಾಡುವುದಾಗಿ ಹೇಳಿದ್ದರು. ಮೊದಲಿನಿಂದಲೂ ಕೇವಲ ಆಶ್ವಾಸನೆಗಳ ಮೂಲಕವೇ ಚುನಾವಣೆ ಎದುರಿಸಿದ್ದಾರೆ ವಿನಃ ಅಭಿವೃದ್ಧಿ ಮಾಡಿಲ್ಲಲ ಆದರೇ ಮೈಸೂರು ನಗರದಲ್ಲಿ ಕುಡಿಯುವ ನೀರಿನ ಕಬಿನಿ ಎರಡನೇ ಹಂತದ ಯೋಜನೆ ಜಾರಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಮಣ್ಣನೆಯಿಲ್ಲ. ಎನ್‌ಡಿಎ ಸಂಪೂರ್ಣವಾಗಿ ಮೈಸೂರನ್ನು ನಿರ್ಲಕ್ಷಿಸಿದೆ. ಇದೆಲ್ಲದರ ಹೊರತಾಗಿ ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಬೆಂಬಲ ನೀಡಿ ಎಂದು ತಿಳಿಸಿದರು.
ಮಾಜಿ ಮೇಯರ್ ಗಳಾದ ನರಸಿಂಹ ಅಯ್ಯಂಗಾರ್, ಪುರುಷೋತ್ತಮ್, ಅಯೂಬ್ ಖಾನ್, ಭೈರಪ್ಪ, ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ರಾಜೇಶ್ವರಿ, ಪುಷ್ಪಲತಾ ಜಗನ್ನಾಥ್, ಸೇರಿದಂತೆ ಹಲವರು ಭಾಗಿಯಾಗಿದ್ದರು.





