Categories: Uncategorized

ಮೈಸೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಲಕ್ಷ್ಮಣ್‌ಗೆ ಮತ ನೀಡಿ: ಕಾಂಗ್ರೆಸ್‌ ಮಾಜಿ ಮೇಯರ್‌ ಪರಿಷತ್‌

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರಿಗೆ ಮತ ನೀಡಬೇಕು ಎಂದು ಮಾಜಿ ಮೇಯರ್‌ಗಳು ಮನವಿ ಮಾಡಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿಂದು (ಏ.೧೨) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮೇಯರ್‌ ಪರಿಷತ್‌, ನಗರಕ್ಕೆ ಬೇಕಾದ ಅಗತ್ಯ ಕಾರ್ಯಕ್ರಮಗಳು, ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸುವಂತೆ ಕೋರಿದರು.

ಇವರ ಕೂಟವು ಬಿಜೆಪಿ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ ಅವಧಿ ಹಾಗೂ ಬಿಜೆಪಿ ಅವಧಿಯಲ್ಲಿನ ಅಭಿವೃದ್ಧಿಗಳನ್ನು ತುಲನೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಮೋದಿ ಅವರು ಮೈಸೂರನ್ನು ಪ್ಯಾರಿಸ್‌ ಮಾಡುವುದಾಗಿ ಹೇಳಿದ್ದರು. ಮೊದಲಿನಿಂದಲೂ ಕೇವಲ ಆಶ್ವಾಸನೆಗಳ ಮೂಲಕವೇ ಚುನಾವಣೆ ಎದುರಿಸಿದ್ದಾರೆ ವಿನಃ ಅಭಿವೃದ್ಧಿ ಮಾಡಿಲ್ಲಲ ಆದರೇ ಮೈಸೂರು ನಗರದಲ್ಲಿ ಕುಡಿಯುವ ನೀರಿನ ಕಬಿನಿ ಎರಡನೇ ಹಂತದ ಯೋಜನೆ ಜಾರಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಮಣ್ಣನೆಯಿಲ್ಲ. ಎನ್‌ಡಿಎ ಸಂಪೂರ್ಣವಾಗಿ ಮೈಸೂರನ್ನು ನಿರ್ಲಕ್ಷಿಸಿದೆ. ಇದೆಲ್ಲದರ ಹೊರತಾಗಿ ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರಿಗೆ ಬೆಂಬಲ ನೀಡಿ ಎಂದು ತಿಳಿಸಿದರು.

ಮಾಜಿ ಮೇಯರ್ ಗಳಾದ ನರಸಿಂಹ ಅಯ್ಯಂಗಾರ್, ಪುರುಷೋತ್ತಮ್, ಅಯೂಬ್ ಖಾನ್, ಭೈರಪ್ಪ, ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ರಾಜೇಶ್ವರಿ, ಪುಷ್ಪಲತಾ ಜಗನ್ನಾಥ್, ಸೇರಿದಂತೆ ಹಲವರು ಭಾಗಿಯಾಗಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಷ್ಟ್ರಪಿತನ ‘ಸತ್ಯಾನ್ವೇಷಣೆ’ಗೆ ನೂರು ವರುಷ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…

3 mins ago

ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲತೆಯ ಆರ್ಭಟ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…

9 mins ago

ಮೆದಗನಾಣೆ ಗ್ರಾಮಕ್ಕೆ ಕೊನೆಗೂ ವಿದ್ಯುತ್ ಸಂಪರ್ಕ

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…

13 mins ago

ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ  ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…

18 mins ago

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

10 hours ago