ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಶಾಸಕ ಈ.ತುಕಾರಾಮ್, ಮಾಜಿ ಸಚಿವ ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು.