ತೆರಿಗೆ ಏರಿಕೆ, ಇಳಿಕೆ ಪ್ರಸ್ತಾಪವಿಲ್ಲದ ಭರಪೂರ ಅನುದಾನ ಘೋಷಣೆಗಳ ಬೊಮ್ಮಾಯಿ ಬಜೆಟ್
ಬೆಂಗಳೂರು: ಇನ್ನು ಕೇವಲ ಮೂರು ತಿಂಗಳಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ತಮ್ಮ ಎರಡನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ.
ಬಜೆಟ್ನಲ್ಲಿ ಪ್ರಸ್ತಾಪಿಸಿರುವ ಮುಖ್ಯಾಂಶಗಳು ಇಲ್ಲಿವೆ.
* ರಾಜ್ಯದಲ್ಲಿ 19 ಕಾರ್ಮಿಕರ ವಿಮಾ ಆಸ್ಪತ್ರೆ ಆರಂಭ.
* ಬಿಪಿಎಲ್ ಕಾರ್ಡ್ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.
* ವಸತಿ ಯೋಜನೆಯಡಿ ಘಟಕ ಸಹಾಯಧನ ₹1.5 ಲಕ್ಷದಿಂದ ₹ 2 ಲಕ್ಷಕ್ಕೆ ಹೆಚ್ಚಳ.
* ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ. ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ದಾಖಲಾಗುವವರಿಗೆ ಶುಲ್ಕ ವಿನಾಯಿತಿ.
* ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆಯಡಿ ₹10 ಸಾವಿರ ಸಹಾಯಧನ
* ಸಣ್ವ, ಅತಿ ಸಣ್ಣ ರೈತರಿಗಾಗಿ ₹180 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆ ಘೋಷಣೆ.
* ಗೃಹಿಣಿ ಶಕ್ತಿ ಯೋಜನೆ ಘೋಷಣೆ. ಭೂರಹಿತ ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ ₹ 500 ಸಹಾಯ ಧನ
* ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ ‘ವಿದ್ಯಾವಾಹಿನಿ’ ಯೋಜನೆ ಅಡಿಯಲ್ಲಿ ₹ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ
* ರೈತರಿಗೆ ನೀಡಲಾಗುತ್ತಿದ್ದ ₹3 ಲಕ್ಷ ಬಡ್ಡಿ ರಹಿತ ಸಾಲ ₹5 ಲಕ್ಷ ರೂಪಾಯಿಗೆ ಹೆಚ್ಚಳ.
* ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್, 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್.
* ನೇಕಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಏರಿಕೆ.
* ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ
* 73 ಕರ್ನಾಟಕ ಪಬ್ಲಿಕ್ ಶಾಲೆ ಮತ್ತು 50 ಆದರ್ಶ ವಿದ್ಯಾಲಯಗಳ ಸ್ಥಾಪನೆ
* ಬೆಂಗಳೂರಿನಲ್ಲಿ ಅರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ. 75 ಜಂಕ್ಷನ್ ಅಭಿವೃದ್ಧಿ.
* ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರಿನಲ್ಲಿ ₹6,000 ಕೋಟಿ ಕಾಮಗಾರಿಗಳಿಗೆ ಒತ್ತು.
* ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ತಾಯಿ ಮತ್ತು ಮಗು ಮನೆಗೆ ತೆರಳಲು ನಗು–ಮಗು ವಾಹನ.
* ಗ್ರಾಮ ಪಂಚಾಯ್ತಿ ಸದಸ್ಯರು, ಅತಿಥಿ ಶಿಕ್ಷಕರು, ಗ್ರಂಥಾಲಯ ಸಿಬ್ಬಂದಿ, ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಸಹಾಯಕರ ಗೌರವ ಧನ ₹1000 ಹೆಚ್ಚಳ.
* ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ತೃತೀಯ ಹಂತದ ಆರೈಕೆ ಒದಗಿಸಲು ಕೋಲಾರ, ಬಾಗಲಕೋಟೆ, ಯಾದಗಿರಿ, ಗದಗ, ಚಿಕ್ಕಮಗಳೂರು, ರಾಮನಗರ, ವಿಜಯನಗರ ಹಾಗೂ ದೊಡ್ಡಬಳ್ಳಾಪುರದಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ವಿಭಾಗ ಸ್ಥಾಪನೆ.
* ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ₹5 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣ.
* ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ₹100 ಕೋಟಿ.
* ಕೇಂದ್ರದ ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟ ಅಭಿವೃದ್ಧಿ.
* 2.35 ಲಕ್ಷ ವಿದ್ಯುತ್ ಸಂಪರ್ಕರಹಿತ ಮನೆಗಳಿಗೆ ₹ 124 ಕೋಟಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ
* ಪೌರ ಆಸರೆ ಯೋಜನೆ– 5 ಸಾವಿರ ವಸತಿರಹಿತ ಪೌರ ಕಾರ್ಮಿಕರಿಗಾಗಿ ₹ 3 ಸಾವಿರ ಕೋಟಿ ವೆಚ್ಚದಲ್ಲಿ ಮನೆ ನಿರ್ಮಾಣ
* ಕನ್ನಡ ಚಿತ್ರ ರಂಗಕ್ಕೆ ಪ್ರೋತ್ಸಾಹ ನೀಡಲು ಎರಡನೇ ಹಂತದ ನಗರಗಳಲ್ಲಿ 100ರಿಂದ 200 ಆಸನಗಳುಳ್ಳ ಮಿನಿ ಥಿಯೇಟರ್ಗಳ ಸ್ಥಾಪನೆ
* ಬೆಂಗಳೂರಿನಲ್ಲಿ ಭುವನೇಶ್ವರಿ ತಾಯಿಯ ಥೀಮ್ ಪಾರ್ಕ್ ಅಭಿವೃದ್ಧಿ
* ಪದವಿ ಶಿಕ್ಷಣ ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ 2,000 ರೂ. ಆರ್ಥಿಕ ನೆರವು
* ಉನ್ನತ ಶಿಕ್ಷಣ ಸಾಧ್ಯವಾಗದವರಿಗೆ ಐಟಿಐನಲ್ಲಿ ಮೂರು ತಿಂಗಳ ವೃತ್ತಿಪರ ತರಬೇತಿ ಪಡೆಯಲು ಮಾಸಿಕ 1,500 ರೂ. ಶಿಷ್ಯವೇತನ. ತರಬೇತಿ ಪೂರ್ಣಗೊಂಡವರಿಗೆ ಅಪ್ರೆಂಟಿಶಿಪ್ ಕಾರ್ಯಕ್ರಮದಡಿ 3 ತಿಂಗಳು 1,500 ರೂ. ನೆರವು
* ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ 50 ಲಕ್ಷದಿಂದ 1 ಕೋಟಿವರೆಗಿನ ಟೆಂಡರ್ನಲ್ಲಿ ಶೇ 24ರವರೆಗೆ ಮೀಸಲಾತಿ
*ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
* ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
*ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ
* ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ
* 69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ಸಾಲ ಮಂಜೂರು
*ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 49,031 ಕೋಟಿ ಮೀಸಲು
* ಎಸ್ಸಿ, ಎಸ್ಟಿ ನಿಗಮಗಳಿಗೆ 795 ಕೋಟಿ ರೂ. ನೆರವು
* ಎಸ್ಸಿ, ಎಸ್ಟಿ BPL ಕಾರ್ಡ್ ಹೊಂದಿದವರಿಗೆ ಅಮರ್ ಜ್ಯೋತಿ ಯೋಜನೆಯಡಿ 75 ಯೂನಿಟ್ ಉಚಿತ ವಿದ್ಯುತ್.
* ಕಾಯಿಲೆ ಬಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ನೆರವು ಜೊತೆಗೆ ಸ್ವಯಂ ನಿವೃತ್ತಿ ಅವಕಾಶ.
* ಸರಕಾರಿ ಮಹಿಳಾ ಕಾಲೇಜು, ಮಹಿಳಾ ಪಾಲಿಟೆಕ್ನಿಕ್ ಗಳಲ್ಲಿ ಯೋಗ ತರಬೇತಿ
*ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಮಕ್ಕಳ ಬಸ್ ಯೋಜನೆ
*ಅಡಿಕೆ ಬೆಳೆಯ ರೋಗ ನಿರ್ವಹಣೆಗೆ 10 ಲಕ್ಷ ಕೋಟಿ ರೂ. ಅನುದಾನ ಘೋಷಣೆ.
* ದ್ರಾಕ್ಷಿ ಬೆಳೆಗಾರರಿಗೆ 100 ಕೋಟಿ ರೂ. ನೆರವು ಯೋಜನೆ
- ಸಹಸ್ರ ಸರೋವರ’ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ದಿ
- ‘ಸಹ್ಯಾದ್ರಿ ಸಿರಿ’ ಯೋಜನೆ ಅಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗೆ ಯೋಜನೆ
- ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ’ ಯೋಜನೆಗೆ 10 ಕೋಟಿ ರೂ.
- ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ’ ಯೋಜನೆ
ಇಂದು ಮಂಡಿಸಿದ ಕರ್ನಾಟಕ ಆಯವ್ಯಯ-2023-24 ರ ಕುರಿತು ಪತ್ರಿಕಾಗೋಷ್ಠಿ. #ಜನಸ್ನೇಹಿಬಜೆಟ್ #BharavaseyaBudget2023
https://t.co/kGbbpm8OaK— Basavaraj S Bommai (@BSBommai) February 17, 2023