Categories: Uncategorized

ವೈರಲ್‌ ಆಯ್ತು ಅಂಗಲಾಚಿ ರೇಣುಕಾಸ್ವಾಮಿ ಬೇಡಿಕೊಳ್ಳುತ್ತಿರುವ ಫೋಟೋ!

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿಗೆ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಮತ್ತು ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದು ಅದರ ಫೋಟೊಗಳು ದತ್ತಾಂಶ ಮರು ಸಂಗ್ರಹದ ವೇಳೆ ಲಭ್ಯವಾಗಿವೆ. ಆರೋಪಿಗಳ ಕ್ರೌರ್ಯ ಅನಾವರಣವಾಗಿದೆ.

ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ರೇಣುಕಸ್ವಾಮಿ ಕೈಮುಗಿದು ಬೇಡಿಕೊಳ್ಳುತ್ತಿರುವ ಹಾಗೂ ನಿತ್ರಾಣಗೊಂಡು ಅಂಗಾತ ಮಲಗಿರುವ ಫೋಟೊಗಳು ಲಭ್ಯವಾಗಿವೆ.

ಈ ಪ್ರಕರಣದಲ್ಲಿ ನಟ ದರ್ಶನ್ ಅಲಿಯಾಸ್ ಡಿ ಬಾಸ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷ್ಯಗಳು ಸಿಕ್ಕಿದಂತೆ ಆಗಿದೆ.

ಪಟ್ಟಣಗೆರೆ ಶೆಡ್​ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೊ ಇದಾಗಿದೆ. ಮೈಮೇಲೆ ಗಾಯದ ಗುರುತುಗಳಿವೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಇನ್ನ ಮುಂದೆ ಪವಿತ್ರಾಗೆ ಸಂದೇಶ ಕಳುಹಿಸುವುದಿಲ್ಲ.‌ ತಪ್ಪಾಯಿತು ಬಿಡಿ ಎಂದು ಪರಿಪರಿಯಾಗಿ ಕ್ಷಮೆ ಕೋರಿದ್ದರೂ ಆರೋಪಿಗಳ ಮನಸ್ಸು ಕರಗಿರಲಿಲ್ಲ. ಮನಸೋಇಚ್ಛೆ ಹಲ್ಲೆ ನಡೆಸಿದ್ದರು ಎಂದು ಗೊತ್ತಾಗಿದೆ. ಈ ಅಂಶಗಳನ್ನೂ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಕೃತ್ಯದ ವೇಳೆ ಪವಿತ್ರಾಗೌಡ ವ್ಯವಸ್ಥಾಪಕ ಕೆ. ಪವನ್ ಫೋಟೊ ತೆಗೆದು ಅದನ್ನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಮಾಲೀಕ ವಿನಯ್ ಹಾಗೂ ದರ್ಶನ್ ಆಪ್ತ‌, ಸಾಫ್ಟ್‌ವೇರ್ ಎಂಜಿನಿಯರ್ ಪ್ರದೂಷ್ ಅವರ ಐಫೋ‌ನ್‌ಗೆ ಕಳುಹಿಸಿದ್ದರು. ರೇಣುಕಸ್ವಾಮಿ ಮೃತಪಟ್ಟ ನಂತರ ಫೋಟೊ ಡಿಲೀಟ್ ಮಾಡಿ ಸಾಕ್ಷ್ಯ ನಾಶ ಪಡಿಸಿದ್ದರು. ದತ್ತಾಂಶ ಮರು ಸಂಗ್ರಹದ ವೇಳೆ ಆ ಫೋಟೊ ಲಭ್ಯವಾಗಿವೆ.

ಈ ಪ್ರಕರಣದಲ್ಲಿ ದರ್ಶನ್‌ ವಿರುದ್ಧ 3991 ಪುಟಗಳ ಚಾರ್ಜ್‌ ಶೀಟ್‌ ಹಾಗೂ  231 ಸಾಕ್ಷ್ಯಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago