ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ ಎ2 ಆರೋಪಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಹೈಕೋರ್ಟ್ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಗೌಡ, ಎ2 ಆರೋಪಿ ದರ್ಶನ್ ಸೇರಿದಂತೆ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಇಂದು (ನ.21) ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವೂ ನವೆಂಬರ್ 26ಕ್ಕೆ ಮುಂದೂಡಿಕೆ ಮಾಡಿದೆ.