ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪದಲ್ಲಿ ಆಟೋ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಘಟನೆ ಇಂದು(ನ.29) ಸುಮಾರು ಬೆಳಿಗ್ಗೆ 9 ಗಂಟೆಗೆ ಸಂಭಿವಿಸಿದ್ದು, ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮಂಗಲ ಗ್ರಾಮದ ಹಿಮಾನ್ ರಾಜ್(11) ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಇನ್ನು ಇದೇ ವೇಳೆ ಮತ್ತಿಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.
ಗಾಯಗೊಂಡ ಇಬ್ಬರು ಮಕ್ಕಳನ್ನು ಸಮೀಪದ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳವನ್ನು ಪರಿಶೀಲನೆ ಮಾಡಿದ್ದು, ಅಪಘಾತ ಸಂಭವಿಸಿದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮಗೆರೆ ಗ್ರಾಮದ ಬಳಿ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ಅಪಘಾತ ನಡೆದ ಸ್ಥಳದಲ್ಲಿ ಅನೇಕ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.