ಬೆಳ್ತಂಗಡಿ : ಇಲ್ಲಿನ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಂದು(ಆ.21) ಧರ್ಮಸ್ಥಳಕ್ಕೆ ತೆರಳಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್, ಯೂಟ್ಯೂಬರ್ ವಿರುದ್ಧ ದೂರು ದಾಖಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ಕುತಂತ್ರ ಮಾಡಿದ್ದಾರೆ, ಕೇವಲ ದುರುದ್ದೇಶದೊಂದಿಗೆ ಅವರು ಇದನ್ನೆಲ್ಲ ಮಾಡುತ್ತಿದ್ದಾರೆ ಮತ್ತು ಕ್ಷೇತ್ರಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದು ಹೇಳಿದರು.
ಸುಜಾತ ಭಟ್ ಅನ್ನುವವರನ್ನು ಈಗ ತಮ್ಮೊಂದಿಗೆ ಸೇರಿಸಿಕೊಂಡಿದ್ದಾರೆ ಎಂದ ಕೃಷ್ಣ ತಾನು ನೀಡಿರುವ ದೂರನ್ನು ಸ್ವೀಕರಿಸಿ ಸ್ವೀಕೃತಿ ಪತ್ರ ನೀಡಿದ್ದಾರೆ, ಎಸ್ಐಟಿ ತನಿಖೆ ನಡೆಯುತ್ತಿರುವುದರಿಂದ ಎಫ್ಐಅರ್ ದಾಖಲಿಸಲು ಬರೋದಿಲ್ಲ ಎಂದು ಪೊಲೀಸರು ಹೇಳಿದ್ದಾರೆ ಎಂದರು.





