Mysore
22
broken clouds
Light
Dark

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಸಂಗೀತ ನಿರ್ದೇಶಕ ಹಂಸಲೇಖ ಕಿವಿಮಾತು

ಮಂಡ್ಯ: ಕನ್ನಡದ ಸ್ಟಾರ್‌ ನಟ ದರ್ಶನ್‌ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ಗೆ ಕಿವಿಮಾತು ಹೇಳಿದ್ದಾರೆ.

ಕನ್ನಡದ ಸ್ಟಾರ್‌ ನಟ ದರ್ಶನ್‌ ಅವರು ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸುದೀಪ್‌, ಶಿವಣ್ಣ, ಜಗ್ಗೇಶ್‌ ಬಳಿಕ ಇದೀಗ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್‌ ಪ್ರಕರಣದಿಂದ ಸ್ಯಾಂಡಲ್‌ವುಡ್‌ಗೆ ಕಳಂಕ ವಿಚಾರವಾಗಿ ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ ಅವರು, ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ. ಕೇರಳ ಚಿತ್ರೋದ್ಯಮ ಹೀಗೇಯೇ ಆಗಿತ್ತು. ಅದೀಗ ಉತ್ತುಂಗದಲ್ಲಿದೆ. ಕೆಳಗೆ ಬಿದ್ದು ಮತ್ತೆ ಮೇಲೆ ಎದ್ದಿದೆ. ನಮ್ಮದು ಚಂದನವನ ಕಣಯ್ಯ. ಒಂದು ಮಳೆಗೆ ಮರ ಒಣಗಿದರೇನಂತೆ, ಇನ್ನೊಂದು ಮಳೆಗೆ ಕಾಡು ಬೆಳೆದೇ ಬೆಳೆಯುತ್ತೆ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಸಿನಿಮಾ ಕಲಾವಿದರಾದವರು ಸಣ್ಣದಾಗಿ ಯೋಚನೆ ಮಾಡಬೇಕು. ಸಿಟ್ಟನ್ನು ಸ್ಕ್ರಿಪ್ಟ್‌ ಮಾಡಬೇಕು. ದ್ವೇಷವನ್ನು ಕ್ಯಾರೆಕ್ಟರ್‌ ಮಾಡಬೇಕು. ನಾವು ಆ ರೀತಿ ಸಿನಿಮಾದಲ್ಲಿ ತೋರಿಸಬೇಕು ಅಷ್ಟೇ. ನಿಜ ಜೀವನದಲ್ಲಿ ಸ್ಕ್ರಿಪ್ಟನ್ನು ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್‌ ಆಗಬಾರದು. ಇದು ಕಲಾವಿದನ ಕರ್ತವ್ಯ ಎಂದು ದರ್ಶನ್‌ಗೆ ಕಿವಿಮಾತು ಹೇಳಿದರು.