ಮಂಡ್ಯ: ಕನ್ನಡದ ಸ್ಟಾರ್ ನಟ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ಗೆ ಕಿವಿಮಾತು ಹೇಳಿದ್ದಾರೆ.
ಕನ್ನಡದ ಸ್ಟಾರ್ ನಟ ದರ್ಶನ್ ಅವರು ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸುದೀಪ್, ಶಿವಣ್ಣ, ಜಗ್ಗೇಶ್ ಬಳಿಕ ಇದೀಗ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಪ್ರಕರಣದಿಂದ ಸ್ಯಾಂಡಲ್‌ವುಡ್‌ಗೆ ಕಳಂಕ ವಿಚಾರವಾಗಿ ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ ಅವರು, ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ. ಕೇರಳ ಚಿತ್ರೋದ್ಯಮ ಹೀಗೇಯೇ ಆಗಿತ್ತು. ಅದೀಗ ಉತ್ತುಂಗದಲ್ಲಿದೆ. ಕೆಳಗೆ ಬಿದ್ದು ಮತ್ತೆ ಮೇಲೆ ಎದ್ದಿದೆ. ನಮ್ಮದು ಚಂದನವನ ಕಣಯ್ಯ. ಒಂದು ಮಳೆಗೆ ಮರ ಒಣಗಿದರೇನಂತೆ, ಇನ್ನೊಂದು ಮಳೆಗೆ ಕಾಡು ಬೆಳೆದೇ ಬೆಳೆಯುತ್ತೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಸಿನಿಮಾ ಕಲಾವಿದರಾದವರು ಸಣ್ಣದಾಗಿ ಯೋಚನೆ ಮಾಡಬೇಕು. ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು. ದ್ವೇಷವನ್ನು ಕ್ಯಾರೆಕ್ಟರ್ ಮಾಡಬೇಕು. ನಾವು ಆ ರೀತಿ ಸಿನಿಮಾದಲ್ಲಿ ತೋರಿಸಬೇಕು ಅಷ್ಟೇ. ನಿಜ ಜೀವನದಲ್ಲಿ ಸ್ಕ್ರಿಪ್ಟನ್ನು ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್ ಆಗಬಾರದು. ಇದು ಕಲಾವಿದನ ಕರ್ತವ್ಯ ಎಂದು ದರ್ಶನ್‌ಗೆ ಕಿವಿಮಾತು ಹೇಳಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…