Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಾರ್ವಜನಿಕರಿಗೆ ಸಮರ್ಪಕವಾಗಿ ʼಗ್ಯಾರಂಟಿʼ ತಲುಪಲಿ: ಹೆಚ್.ಕೆ ರುದ್ರಪ್ಪ

ಮಂಡ್ಯ: ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೆಚ್.ಕೆ ರುದ್ರಪ್ಪ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ 5 ಗ್ಯಾರಂಟಿ ಯೋಜನೆಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು. 5 ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಮುಂದಿನ ಸಭೆಯಲ್ಲಿ ಕ್ರೂಡೀಕೃತ ಮಾಹಿತಿಯನ್ನು ಸಲ್ಲಿಸಲು ತಿಳಿಸಿದರು.

ಸಾರ್ವಜನಿಕರಿಂದ ಗ್ಯಾರಂಟಿ ಯೋಜನೆಗೆಗಳ ಬಗ್ಗೆ  ದೂರು ಬರಬಾರದು. ಗ್ಯಾರಂಟಿ ಯೋಜನೆಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಬೇಕು ಎಂದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಂ.ಎಸ್ ವೀಣಾ, ತಾಲ್ಲೂಕು ಯೋಜನಾಧಿಕಾರಿಗಳಾದ ವೆಂಕಟ್ ರಾವ್ ಸೇರಿದಂತೆ ಗ್ಯಾರಂಟಿ ಯೋಜನೆಯ ಸದಸ್ಯರುಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags: