Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಸಿಎಂ

ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. ಕೇಂದ್ರ , ರಾಜ್ಯ ಸರ್ಕಾರಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳು ಸಂವಿಧಾನದಂತೆ ನಡೆದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತೆ ಕೆಲಸ ಮಾಡಬೇಕು. ಆದ್ದರಿಂದ ರಾಜ್ಯದ ಎಲ್ಲ ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿ, ಅದರ ಆಶಯಗಳನ್ನು ವಿದ್ಯಾರ್ಥಿಗಳು ಮನನ ಮಾಡಿಕೊಳ್ಳಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಸರ್ಕಾರ ಸಂವಿಧಾನ ರಕ್ಷಿಸುವ ಕಾರ್ಯ ಮಾಡುತ್ತಿದೆ

ಸಂವಿಧಾನವನ್ನು ತಿದ್ದುಪಡಿ ಮಾಡಲಾಗುವುದು ಎಂಬ ಬಿಜೆಪಿಯವರ ಧೋರಣೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸಂವಿಧಾನಕ್ಕೆ ವಿರೋಧವಾಗಿರುವವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳೂ ಸಹ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು ಎಂದರು.

Tags:
error: Content is protected !!