ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವಿನ ಕೇಸ್ ಅನ್ನು ವಿಧಾನ ಪರಿಷತ್ ಎಥಿಕ್ಸ್ ಕಮಿಟಿಗೆ ರವಾನಿಸಲಾಗಿದೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣ ಈಗಾಗಲೇ ಅಂತ್ಯವಾಗಿದೆ. ಈ ಬಗ್ಗೆ ನಾನು ಬೆಳಗಾವಿಯಲ್ಲೇ ರೂಲಿಂಗ್ ನೀಡಿದ್ದೆ. ಆದರೆ ಅವರಿಬ್ಬರೂ ಮತ್ತೊಮ್ಮೆ ದೂರು ನೀಡಿದ್ದಾರೆ. ಈ ಮಧ್ಯೆ ಇವರಿಬ್ಬರಿಗೂ ಸಂಧಾನ ಮಾಡಲು ಮುಂದಾಗಿದ್ದೆ, ಅವರು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ನೀಡಿದ್ದೇನೆ ಎಂದು ಹೇಳಿದರು.
ಈ ಕೇಸ್‌ನ ಕುರಿತು ಎಥಿಕ್ಸ್ ಕಮಿಟಿ ವರದಿ ನೀಡಲು ಒಂದು ತಿಂಗಳವರೆಗೂ ಕಾಲಾವಕಾಶ ನೀಡಿದ್ದೇನೆ. ಅದರ ವರದಿ ಬಂದ ಮೇಲೆ ಮುಂದಿನ ನಿರ್ಧಾರ ಮಾಡುತ್ತೇನೆ. ಆದರೆ ಈ ವಿಚಾರದ ಬಗ್ಗೆ ಸದನಲ್ಲಿ ಚರ್ಚೆ ಆಗುವುದಿಲ್ಲ. ಅಲ್ಲದೇ ಎಥಿಕ್ಸ್ ಕಮಿಟಿಯಲ್ಲಿ ಸಿ.ಟಿ ರವಿ ಇದ್ದರೂ, ಈಗ ಅವರದ್ದೇ ಕೇಸ್ ಬಂದಿರುವುದರಿಂದ ಅವರನ್ನು ಎಥಿಕ್ಸ್ ಕಮಿಟಿಯಿಂದ ಕೈ ಬಿಡಲಾಗಿದೆ ಎಂದರು.
ಇನ್ನು ಸದನದಲ್ಲಿ ಮುಗಿದದ್ದನ್ನ ಅಲ್ಲೇ ಮುಗಿಸಬೇಕಿತ್ತು. ಸದನ ನಡೆದಾಗ ನಡೆದಿದ್ದರೆ ಹೀಗೆ ಆಗ್ತಿರಲಿಲ್ಲ. ಸದನ ನಡೆಯದೇ ಇದ್ದಾಗ ಇದು ನಡೆದಿರೋದಕ್ಕೆ ಇಷ್ಟು ದೊಡ್ಡದು ಆಗಿದೆ. ಹಾಗಾಗಿ ಇದನ್ನು ಎಥಿಕ್ಸ್ ಕಮಿಟಿಗೆ ನೀಡಲಾಗಿದೆ. ಎಥಿಕ್ಸ್ ಕಮಿಟಿ ವರದಿ ನೀಡಲಿ ಮುಂದೆ ನೋಡೋಣ. ಎಥಿಕ್ಸ್ ಕಮಿಟಿಯಲ್ಲಿಯೇ 99% ಸಮಸ್ಯೆ ಪರಿಹಾರ ಆಗುವ ವಿಶ್ವಾಸ ಇದೆ. ಇಲ್ಲದೇ ಹೋದರೆ ಎಥಿಕ್ಸ್ ಕಮಿಟಿ ವರದಿಯನ್ನು ಅಧಿವೇಶನದಲ್ಲಿ ಮಂಡನೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…