ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲಾ ಪಾರ್ಟಿಯವರೂ ಸಹಾಯ ಮಾಡಿದ್ದಾರೆ. ಇಲ್ಲಿ ಬಿಜೆಪಿಯವರೂ ಸಪೋರ್ಟ್ ಮಾಡಿದ್ದಾರೆ ಎಂದರು.
ಪರೋಕ್ಷವಾಗಿ ಕಾಂಗ್ರೆಸ್ ಗೆಲುವಿಗೆ ಜೆಡಿಎಸ್ ಹಾಗೂ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ. ಅಶ್ವಥ್ ನಾರಾಯಣ್ ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂದ್ರು. ಇದರ ಅರ್ಥ ಏನು ಎಂದು ಪ್ರಶ್ನೆ ಮಾಡಿದರು.
ಇನ್ನು ಚನ್ನಪಟ್ಟಣ ಕ್ಷೇತ್ರದ ಜನರ ನಮ್ಮ ಪರವಾಗಿದ್ದಾರೆ. ಕ್ಷೇತ್ರದ ಜನರಿಗೆ ಏನೇಲ್ಲಾ ಮಾತು ಕೊಟ್ಟಿದ್ವೋ ಅದನ್ನು ಮೊದಲು ಅನುಷ್ಠಾನ ಮಾಡಬೇಕು. ನಾನು ಹಾಗೂ ಯೋಗೇಶ್ವರ್ ಇಬ್ಬರೂ ಕೂತು ಚರ್ಚೆ ಮಾಡಿ ಇದಕ್ಕೆಲ್ಲಾ ಚಾಲನೆ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿದರು.