ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ರದ್ಧತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಆಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಈ ಗ್ಯಾರಂಟಿ ಯೋಜನೆಗಳು ನುಂಗಲಾರದ, ಉಗಿಯಲಾಗದ ಬಿಸಿ ತುಪ್ಪವಾಗಿವೆ. ಅನ್ನಭಾಗ್ಯದ ಹೊರೆ ಹೊರಲಾಗದೇ ಲಕ್ಷಾಂತರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ತೆರಿಗೆದಾರರು, ಸರ್ಕಾರಿ ನೌಕರರಿಗೆ ಉಚಿತ ಹಕ್ಕಿ ಕೊಡಬೇಕಾ ಎಂದು ಸಿಎಂ ಹೇಳಿದ್ದಾರೆ. ಹಾಗಾದರೆ ಶಕ್ತಿ ಯೋಜನೆ ಅಡಿಯಲ್ಲಿ ತೆರಿಗೆದಾರರು, ಸರ್ಕಾರಿ ನೌಕರರು ಉಚಿತ ಬಸ್ ಸೇವೆ ಬಳಸುತ್ತಿಲ್ಲವೇ?, ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿಲ್ಲವೇʼ ಎಂದು ಪ್ರಶ್ನಿಸಿದರು.
ಇನ್ನು ರಾಜ್ಯ ಸರ್ಕಾರ ನೀಡಿರುವ ಈ ಗ್ಯಾರಂಟಿ ಯೋಜನೆಗಳು ಚುನಾವಣೆ ಗೆದ್ದು ಅಧಿಕಾರ ಹಿಡಿಯುವುದಕ್ಕಾಗಿ ಮಾಡಿರುವ ಗಿಮಿಕ್‌ಗಳೇ ಹೊರತು, ರಾಜ್ಯದ ಬಡ ಜನರನ್ನು ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯಿಂದ ಮೇಲಕ್ಕೆತ್ತುವ ಉದ್ದೇಶವಿಲ್ಲ ಎಂದು ಲೇವಡಿ ಮಾಡಿದರು.