Categories: Uncategorized

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯ ಬಂಗಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐಟಿ ದಾಳಿ ಒತ್ತಡ?
ಇತ್ತೀಚಿಗೆ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್‌ಗೆ ಸಂಬಂಧಿಸಿದಂತೆ ಪದೇ ಪದೇ ದಾಳಿ ನಡೆಸುತ್ತಿದ್ದರು. ಇಂದು ಸಹ ದಾಳಿ ನಡೆಯುತ್ತಿದ್ದ ಸಮಯದಲ್ಲೇ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಪದೇ ಪದೇ ದಾಳಿಗಳು ಮತ್ತು ಸಂಬಂಧಿತ ತನಿಖೆಗಳಿಂದಾಗಿ ರಾಯ್ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ.

ಯಾರು ಈ ಸಿ.ಜೆ. ರಾಯ್?
ಡಾ. ರಾಯ್ ಸಿ.ಜೆ. (ಡಾ. ರಾಯ್ ಚಿರಿಯಾಂಕಂದತ್ ಜೋಸೆಫ್) ಅವರು ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕರಾಗಿದ್ದು, ದಕ್ಷಿಣ ಭಾರತದ ಅಗ್ರಗಣ್ಯ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಬ್ಬರಾಗಿ ಹೆಸರುವಾಸಿಯಾಗಿದ್ದರು. ಬೆಂಗಳೂರು, ಕೇರಳ, ಯುಎಇ ಸೇರಿದಂತೆ ವಿವಿಧೆಡೆ ವ್ಯಾಪಾರ ವಿಸ್ತರಣೆ ಮಾಡಿದ್ದ ಕಂಪನಿ ಜೀರೋ-ಡೆಬ್ಟ್ ಮಾಡೆಲ್‌ನೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. ಅವರು ಸ್ಲೊವಾಕ್ ರಿಪಬ್ಲಿಕ್‌ನ ಗೌರವ ಕಾನ್ಸುಲ್ ಆಗಿಯೂ ಸೇವೆ ಸಲ್ಲಿಸಿದ್ದರು. ರಿಯಲ್ ಎಸ್ಟೇಟ್‌ನ ಜೊತೆಗೆ ಫಿಲ್ಮ್ ಪ್ರೊಡಕ್ಷನ್, ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಸ್ಪಾನ್ಸರ್‌ಶಿಪ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು.

ಪೊಲೀಸ್ ತನಿಖೆ
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಪೋಸ್ಟ್‌ಮಾರ್ಟಂ ವರದಿ ಮತ್ತು ಇತರ ತಾಂತ್ರಿಕ ಪರಿಶೀಲನೆಗಳ ನಂತರ ಸ್ಪಷ್ಟ ಕಾರಣ ತಿಳಿಯಲಿದೆ. ಐಟಿ ದಾಳಿ ಸಂಬಂಧಿತ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

9 mins ago

ಎಲ್‌ಪಿಜಿ ಹೊತ್ತ ಮತ್ತೊಂದು ಹಡಗು ಭಾರತದತ್ತ

ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…

45 mins ago

ಐಪಿಎಲ್‌ ಟಿಕೆಟ್‌ಗಾಗಿ ಸ್ವೀಕರ್‌ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ…

2 hours ago

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

3 hours ago

ಗ್ಯಾಸ್‌ ಸಿಗದೇ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ…

3 hours ago

ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ: ಸಚಿವ ಚಲುವರಾಯಸ್ವಾಮಿ ಆರೋಪ

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು…

4 hours ago