Mysore
29
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಉಪ ಚುನಾವಣೆ: ಸಂಡೂರಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣಗೆ ಗೆಲುವು

ಸಂಡೂರು: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ.ಅನ್ನಪೂರ್ಣ ಅವರು  ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಈ ಮೂಲಕ ಸಂಡೂರು ಕ್ಷೇತ್ರದ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ದಾಖಲಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರ ಬಳಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಕೈ ನಾಯಕರ ಪರವಾಗಿ ಜೈಕಾರ ಹಾಕಿದ್ದಾರೆ.

ಇತ್ತ ಸೋಲೊಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಧರ್ಮದ ವಿರುದ್ಧ ಅಧರ್ಮ ಗೆದ್ದಿದೆ. ಸೋಲವನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್‌ ಹಣ ಬಲದಿಂದ ಗೆದ್ದಿಗೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Tags:
error: Content is protected !!