Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸುಮಲತಾ ಭೇಟಿಯಾದ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಗೆ ಮಣೆ ಹಾಕಿದ ಎನ್‌ಡಿಎ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುತ್ತಿದ್ದಂತೆ ಸುಮಲತಾ ಪಾಳಯದಲ್ಲಿ ಒಳ ಬೇಗುದಿ ಹೆಚ್ಚಾಗಿದ್ದು, ಇದನ್ನು ಶಮನ ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ನಿವಾಸದಲ್ಲಿ ಸುಮಲತಾ ಅವರನ್ನ ಭೇಟಿಯಾದ ಬಿವೈ ವಿಜಯೇಂದ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಟ್ಟಿರುವ ಕಾರಣ ಸುಮಲತಾ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರ ಹಿನ್ನಲೆ ಇಂದು ಸುಮಲತಾ ಅವರು ತಮ್ಮ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆ ಬಳಿಕ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ.

Tags: